ವರಮಹಾಲಕ್ಷ್ಮಿ ಹಬ್ಬ ಮುಗಿಸಿ ಮರಳುವಾಗ ದುರಂತ; ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆ ಸಾ*ವು, ಇಬ್ಬರಿಗೆ ಗಾಯ

ಹೊಸದಿಗಂತ ವರದಿ ದಾವಣಗೆರೆ: ವರಮಹಾಲಕ್ಷ್ಮೀ ಹಬ್ಬ ಮುಗಿಸಿಕೊಂಡು ತವರು ಮನೆಯಿಂದ ವಾಪಸಾಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ದಾವಣಗೆರೆಯ ಆನಗೋಡು ಸಮೀಪದ ಆರಾಧ್ಯ ಫ್ಯಾಕ್ಟರಿ ಬಳಿ ನಡೆದಿದೆ. ಆನಗೋಡು ಗ್ರಾಮದ ಲಕ್ಷ್ಮೀ(28) ಮೃತ ಮಹಿಳೆ. ಅಪಘಾತದಲ್ಲಿ ಮೃತಳ ತಂದೆ ಕೃಷ್ಣಪ್ಪ(62) ಗಂಭೀರವಾಗಿ ಗಾಯಗೊಂಡಿದ್ದು, ಪುತ್ರಿ ಶರಣ್ಯಳಿಗೂ(5) ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವರಮಹಾಲಕ್ಷ್ಮೀ ಹಬ್ಬ … Continue reading ವರಮಹಾಲಕ್ಷ್ಮಿ ಹಬ್ಬ ಮುಗಿಸಿ ಮರಳುವಾಗ ದುರಂತ; ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆ ಸಾ*ವು, ಇಬ್ಬರಿಗೆ ಗಾಯ