October 10, 2026
Saturday, October 10, 2026
spot_img

ಬಲಮುರಿ ಪ್ರವಾಸಿ ತಾಣದಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಯುವಕರಿಬ್ಬರು ಸಾವು

ಹೊಸ ದಿಗಂತ ವರದಿ, ಶ್ರೀರಂಗಪಟ್ಟಣ :

ತಾಲೂಕಿನ ಪ್ರಸಿದ್ದ ಪ್ರವಾಸಿ ತಾಣ ಬಲಮುರಿ ಕಾವೇರಿ ನದಿಯಲ್ಲಿ ಯುವಕರಿಬ್ಬರು ಮುಳುಗಿ ಸಾವನ್ನಪ್ಪರುವ ಘಟನೆ ಸಂಜೆ ನಡೆದಿದೆ.

ಮೈಸೂರು ನಗರದ ಬೆಳಗೊಳ ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್‌ ಟೆಕ್ನಾಲಜಿ ಯಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜ ನಗರ ಜಿಲ್ಲೆಯ ಸಂತೆಮರಳಿ ಬಳಿಯ ತಮರವಾಡಿ ಗ್ರಾಮದ ಮೊಹನ್ ಕುಮಾರ್ (21) ಹಾಗೂ ಮೈಸೂರು ಜಯಪುರ ಬಳಿಯ ಕೆಳಹಳ್ಳಿ ಗ್ರಾಮ ರವಿಚಂದ್ರ (21) ಸಾವನಪ್ಪಿದ ಯುವಕರು ಎಂದು ತಿಳಿದು ಬಂದಿದೆ.

ಈ ಇಬ್ಬರು ಐ.ಟಿ.ಐ ಮುಗಿಸಿ ಕೇನ್ಸ್‌ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದು ತನ್ನ ಮತ್ತೊಬ್ಬ ಸ್ನೇಹಿತ ವಿಕಾಸ್ ಜೊತೆಗೂಡಿ ಮೂವರು ಬಲಮುರಿ ಪ್ರವಾಸಿ ತಾಣಕ್ಕೆ ಬಂದಿದ್ದ ಸಂದರ್ಭದಲ್ಲಿ ಈಘಟನೆ ನಡೆದಿದೆ.

Must Read