March 25, 2026
Wednesday, March 25, 2026
spot_img

ಮಾರ್ಕೋನಹಳ್ಳಿ ಡ್ಯಾಂನಲ್ಲಿ ದುರಂತ: ಒಂದೇ ಕುಟುಂಬದ 6 ಮಂದಿ ನೀರುಪಾಲು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಯಡಿಯೂರು ಬಳಿ ಮಾರ್ಕೋನಹಳ್ಳಿ ಡ್ಯಾಂ ನೀರಿನಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ಆರು ಮಂದಿ ನೀರುಪಾಲಾಗಿದ್ದಾರೆ.

ಕೊಚ್ಚಿ ಹೋಗುತ್ತಿದ್ದ ಏಳು ಮಂದಿ ಪೈಕಿ ಓರ್ವನನ್ನು ರಕ್ಷಿಸಲಾಗಿದೆ. ಇನ್ನುಳಿದಂತೆ ಇಬ್ಬರ ಮೃತದೇಹ ಪತ್ತೆಯಾಗಿದ್ದು ನಾಲ್ವರಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಮೃತರನ್ನು ತುಮಕೂರು ನಗರದ ಬಿ.ಜಿ.ಪಾಳ್ಯದ ನಿವಾಸಿಗಳಾದ ಸಾಜಿಯಾ, ಅರ್ಬಿನ್ ಎಂದು ಗುರುತಿಸಲಾಗಿದೆ. ಇನ್ನು ಶಬಾನ (44), ತಬಾಸುಮ್ (45), ಮಹಿಬ್ (1) ಮತ್ತು ಮಿಫ್ರಾ (4 ಕಣ್ಮರೆಯಾದವರು. ನವಾಜ್‌ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ದುರಂತದ ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಹಾಗೂ ಅಮೃತೂರು ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !