October 18, 2026
Sunday, October 18, 2026
spot_img

ರಸ್ತೆ ಗುಂಡಿ ತಂದಿಟ್ಟ ಆಪತ್ತು: ಕಾರು-ಬಸ್ ನಡುವೆ ಮುಖಾಮುಖಿ ಡಿಕ್ಕಿ, ಮಗು ಸೇರಿ ಒಂದೇ ಕುಟುಂಬದ ಐವರು ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹಬ್ಬದ ದಿನಗಳಲ್ಲೇ ಭೀಕರ ದುರಂತವೊಂದು ಸಂಭವಿಸಿದೆ. ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪಂಢರಪುರ-ಖಾಮಗಾಂವ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ರಾಜ್ಯ ಸಾರಿಗೆ (ST) ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಪುಟ್ಟ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.

ರಸ್ತೆ ಗುಂಡಿಯೇ ಯಮಸ್ವರೂಪವಾಯಿತು

ವೇಗವಾಗಿ ಬರುತ್ತಿದ್ದ ಸ್ವಿಫ್ಟ್ ಕಾರಿನ ಚಾಲಕನಿಗೆ ರಸ್ತೆಯಲ್ಲಿದ್ದ ದೊಡ್ಡ ಗುಂಡಿಯೊಂದು ದಿಢೀರನೆ ಎದುರಾಗಿದೆ. ಗುಂಡಿ ತಪ್ಪಿಸಲು ಹೋದಾಗ ನಿಯಂತ್ರಣ ತಪ್ಪಿದ ಕಾರು, ಎದುರಿನಿಂದ ಬರುತ್ತಿದ್ದ ಸಾರಿಗೆ ಬಸ್‌ಗೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರ್‌ನಲ್ಲಿದ್ದ ಐವರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ದೇವಸ್ಥಾನಕ್ಕೆ ಹೋಗಿ ಬರುವಾಗ ಎದುರಾಯ್ತು ಸಾವು

ಮೃತರನ್ನು ಮಾಜಲಗಾಂವ್ ಮೂಲದ ಒಂದೇ ಕುಟುಂಬದವರು ಎಂದು ಗುರುತಿಸಲಾಗಿದೆ. ಮೃತರಲ್ಲಿ ಗಜಾನನ ನಾಮದಾಸ್ ಎಂಬುವವರು ಸೇರಿದ್ದಾರೆ. ಈ ಕುಟುಂಬವು ತುಳಜಾಪುರದ ಭವಾನಿ ಅಮ್ಮನ ದರ್ಶನ ಮುಗಿಸಿಕೊಂಡು ವಾಪಸ್ ಮನೆಗೆ ಮರಳುತ್ತಿದ್ದಾಗ ಈ ಅಬಘಡ ನಡೆದಿದೆ. ಹಬ್ಬದ ಸಂಭ್ರಮದಲ್ಲಿದ್ದ ಮನೆಯಲ್ಲಿ ಈಗ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಥಳದಲ್ಲಿ ಭೀಕರ ದೃಶ್ಯ, ಸಾರ್ವಜನಿಕರ ಆಕ್ರೋಶ

ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಕಾರಿನ ಟಾಪ್, ಮುಂಭಾಗದ ಗ್ಲಾಸ್ ಸಂಪೂರ್ಣ ಪುಡಿಯಾಗಿದ್ದು, ಏರ್‌ಬ್ಯಾಗ್‌ಗಳು ತೆರೆದುಕೊಂಡಿದ್ದರೂ ಜೀವ ಉಳಿಸಲಾಗಿಲ್ಲ. ಕಾರಿನ ಬಿಡಿಭಾಗಗಳು ಹೆದ್ದಾರಿಯುದ್ದಕ್ಕೂ ಹರಡಿಕೊಂಡಿದ್ದವು. ಈ ಭೀಕರ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿದ್ದು, ಬೆಳಗಿನ ಜಾವ ಸಾರ್ವಜನಿಕರು ಎಂದಿನಂತೆ ಓಡಾಡುತ್ತಿದ್ದಾಗ ದಿಢೀರನೆ ದೊಡ್ಡ ಶಬ್ದ ಕೇಳಿ ಎಲ್ಲರೂ ಹೆದ್ದಾರಿಯತ್ತ ಓಡಿ ಹೋಗಿರುವುದು ಕಂಡುಬಂದಿದೆ.

ಇದನ್ನೂ ಓದಿ:

ಅಪಘಾತದ ಬೆನ್ನಲ್ಲೇ ರಸ್ತೆಯ ಅವ್ಯವಸ್ಥೆ ಹಾಗೂ ಗುಂಡಿಗಳ ವಿರುದ್ಧ ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿ.ಮೀ. ವಾಣಿಜ್ಯ ಟ್ರಕ್‌ಗಳು ಮತ್ತು ಬಸ್‌ಗಳು ಸಾಲುಗಟ್ಟಿ ನಿಂತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಸಾರ್ವಜನಿಕರನ್ನು ಸಮಾಧಾನಪಡಿಸಿ ಸಂಚಾರವನ್ನು ಸುಗಮಗೊಳಿಸಿದ್ದಾರೆ.

Must Read