November 6, 2026
Friday, November 6, 2026
spot_img

ಕಟ್ಟಡ ಕಾಮಗಾರಿ ವೇಳೆ ದುರಂತ: ಸೆಂಟ್ರಿಂಗ್ ಕುಸಿದು ಮೂವರು ಕಾರ್ಮಿಕರು ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬೆಂಗಳೂರು–ತಮಿಳುನಾಡು ಗಡಿಭಾಗದ ಹೊಸೂರಿನ ಸಿಪ್‌ಕಾಟ್‌ ಪ್ರದೇಶದಲ್ಲಿ ಕಾರ್ಖಾನೆ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಸೆಂಟ್ರಿಂಗ್ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.

ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಾಲಾಜಿ ಗೇರ್ಸ್‌ ಕಾರ್ಖಾನೆಯಲ್ಲಿ ಶುಕ್ರವಾರ ಕಾಂಕ್ರೀಟ್‌ ಹಾಕುವ ವೇಳೆ ಸೆಂಟ್ರಿಂಗ್‌ಗೆ ಆಧಾರವಾಗಿ ಹಾಕಿದ್ದ ಮರದ ದಿಮ್ಮಿಗಳು ಏಕಾಏಕಿ ಕುಸಿದಿವೆ. ಪರಿಣಾಮ ಕಾರ್ಮಿಕರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ. ಮೃತರನ್ನು ಕುಮರೇಶನ್‌ (39), ಮೈಕೆಲ್‌ (26) ಮತ್ತು ಶ್ರೀನಿವಾಸನ್‌ (26) ಎಂದು ಗುರುತಿಸಲಾಗಿದೆ. ಕ್ರೇನ್‌ ಬಳಸಿ ಮೃತದೇಹಗಳನ್ನು ಹೊರತೆಗೆಯಲಾಗಿದೆ.

ಇದನ್ನೂ ಓದಿ:

ಜಿಲ್ಲಾಧಿಕಾರಿ ದಿನೇಶ್‌ ಮತ್ತು ಎಸ್‌ಪಿ ಅನಿತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಂಕ್ರೀಟ್‌ ಭಾರ ತಡೆದುಕೊಳ್ಳಲು ಅಗತ್ಯವಾದ ಕಂಬಗಳು ಹಾಗೂ ಸೂಕ್ತ ಸುರಕ್ಷತಾ ವ್ಯವಸ್ಥೆ ಇರಲಿಲ್ಲ ಎಂಬುದು ಪ್ರಾಥಮಿಕ ಪರಿಶೀಲನೆಯಲ್ಲಿ ತಿಳಿದುಬಂದಿದೆ.

ನಿರ್ಲಕ್ಷ್ಯದ ಕುರಿತು ತನಿಖೆ ನಡೆಸಿ, ಕಟ್ಟಡದ ವಿನ್ಯಾಸ ರೂಪಿಸಿದ ಎಂಜಿನಿಯರ್‌ ಸೇರಿದಂತೆ ಕಾಮಗಾರಿಯಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

Must Read