ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಣೇಶ್ ವಿಸರ್ಜನೆ ವೇಳೆ ತಂದೆ-ಮಗ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ತುರುವೇಕೆರೆ ತಾಲೂಕಿನ ಮಾರಸಂದ್ರ ಗ್ರಾಮದ ಬಳಿಯ ರಂಗನಹಟ್ಟಿ ಕೆರೆಯಲ್ಲಿ ನಡೆದಿದೆ.
ತಂದೆ ರೇವಣ್ಣ (46), ಮಗ ಶರತ್ (26), ದಯಾನಂದ ಮೃತಪಟ್ಟವರು. ಇಂದು ಗ್ರಾಮದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲು ಮುಂದಾದಾಗ ಘಟನೆ ನಡೆದಿದೆ.
ಅಗ್ನಿಶಾಮಕ ದಳ ಹಾಗೂ ಪೊಲೀಸರು ಶವಗಳಿಗಾಗಿ ಶೋಧ ನಡೆಸಿದ್ದು, ದಂಡಿನಶಿವರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.