ಹೊಸದಿಗಂತ ಡಿಜಿಟಲ್ ಡೆಸ್ಕ್:
ನೆಲಮಂಗಲ ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ತೊರೆ ಮೂಡಲಪಾಳ್ಯದ ನಿವಾಸಿ ಅಶ್ವಿನಿ ಎಂದು ಗುರುತಿಸಲಾಗಿದೆ.
ನೆಲಮಂಗಲ ಸಮೀಪದ ಲಕ್ಕೇನಹಳ್ಳಿ ಬಳಿ ಇಂದು ಬೆಳಗಿನ ಜಾವ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಶ್ವಿನಿ ತಮ್ಮ ಪತಿ ರಮೇಶ್ ಹಾಗೂ ಎರಡನೇ ಮಗನೊಂದಿಗೆ ದೇವಾಲಯಕ್ಕೆ ತೆರಳಿ ಪೂಜೆ ಮುಗಿಸಿ ಬೈಕ್‌ನಲ್ಲಿ ವಾಪಸ್ ಆಗುತ್ತಿದ್ದರು. ಈ ವೇಳೆ ಗುಡೆಮಾರನಹಳ್ಳಿ ಹ್ಯಾಂಡ್‌ಪೋಸ್ಟ್ ಸಮೀಪ ಓವರ್ ಸ್ಪೀಡ್‌ನಲ್ಲಿ ಬಂದ ಇಕೋ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬೈಕ್‌ಗೆ ಢಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಅಶ್ವಿನಿಗೆ ತಲೆಗೆ ಗಂಭೀರ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವ ಸಂಭವಿಸಿದೆ. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಪತಿ ರಮೇಶ್ ಹಾಗೂ ಮಗ ಯವನ್ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

