ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಸಮೀಪದ ಕೊಣಾಜೆಕಲ್ಲು ಗುಡ್ಡದಲ್ಲಿ ಟ್ರೆಕ್ಕಿಂಗ್ ವೇಳೆ ವಿದ್ಯಾರ್ಥಿಯೊಬ್ಬನು ಆಕಸ್ಮಿಕವಾಗಿ ಜಾರಿ ಬಿದ್ದು ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.
ಮಂಗಳೂರಿನ ಸಿ.ಎ. ಅಂತಿಮ ವರ್ಷದ ಕೇರಳ ಅಡೂರು ನಿವಾಸಿ ಕಾರ್ತಿಕ್ (22) ಹಾಗೂ ಪುತ್ತೂರು ತಾಲೂಕು ಇರ್ದೆ ಗ್ರಾಮದ ಬೆಟ್ಟಂಪಾಡಿ ನಡುವಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಎಂಬವರ ಪುತ್ರ ಮನೋಜ್ ಎನ್. (22) ಎಂಬವರು ಕೊಣಾಜೆಕಲ್ಲು ಗುಡ್ಡಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದರು.
ಟ್ರೆಕ್ಕಿಂಗ್ ವೇಳೆ ಮನೋಜ್ ಆಕಸ್ಮಿಕವಾಗಿ ಜಾರಿ ಬಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ದುರ್ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.