July 16, 2026
Thursday, July 16, 2026
spot_img

ಕಾವೇರಿ ನದಿಯಲ್ಲಿ ಈಜಲು ಹೋದ ನಾಲ್ವರು ಜಲಸಮಾಧಿ

ಹೊಸದಿಗಂತ ವರದಿ ಮಂಡ್ಯ:

ಕಾವೇರಿ ನದಿ ದಡದಲ್ಲಿ ಸೆಲ್ಪಿ ತೆಗೆಯಲು ಹೋದ ಒಂದೇ ಕುಟುಂಬದ ನಾಲ್ಕು ಮಂದಿ ಮಹಿಳೆಯರು ಸೇರಿದಂತೆ ಐವರು ಜಲ ಸಮಾದಿಯಾಗಿರುವ ಘಟನೆ ಮಳವಳ್ಳಿ ತಾಲೂಕಿನ ಮುತ್ತತ್ತಿ ಬಳಿ ನಡೆದಿದೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ವಿರುಪಾಕ್ಷಿಪುರ ಹೋಬಳಿ, ಜಗದಪುರ ಗ್ರಾಮದ ನಿವಾಸಿಗಳಾದ ವಿಜಯಮ್ಮ (52), ಅವರ ಮಕ್ಕಳಾದ ಪ್ರಿಯಾಂಕ (28), ಶ್ವೇತಾ (38) ಅವರಮಗಳು ಚೈತ್ರಾ (20), ಹಾಗೂ ಬೆಂಗಳೂರಿನ ಕಾರಿನ ಚಾಲಕ ಮಹೇಶ್ (30) ಎಂಬುವರೇ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

ಚನ್ನಪಟ್ಟಣ ತಾಲೂಕು ಕಬ್ಬಾಳು ದೇವಸ್ಥಾನದಲ್ಲಿ ಬೀಗರ ಔತಣ ಕೂಟದ ನಿಮಿತ್ತ ಆಗಮಿಸಿ, ಪೂಜೆ ಸಲ್ಲಿಸಿದ ಬಳಿಕ ಮಳವಳ್ಳಿ ತಾಲೂಕಿನ ಮುತ್ತತ್ತಿ ಪ್ರವಾಸಿ ತಾಣಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಸಂಜೆ ಸುಮಾರು 4.45ರ ಸಮಯದಲ್ಲಿ ಕಾವೇರಿ ನದಿಯ ದಡದಲ್ಲಿ ನಿಂತು ಸೆಲ್ಪಿ ತೆಗೆದುಕೊಳ್ಳುತ್ತಿದ್ದ ವಿಜಯಮ್ಮ ಆಕಸ್ಮಿಕವಾಗಿ ನೀರಿಗೆ ಬಿದ್ದಿದ್ದಾರೆ. ವಿಜಯಮ್ಮಳನ್ನು ರಕ್ಷಿಸಲು ಹೋದ ನಾಲ್ವರು ಸಹ ಒಬ್ಬೊಬ್ಬರಂತೆ ರಕ್ಷಿಸಿಕೊಳ್ಳಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ.

ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಮಹಿಳೆಯರನ್ನು ರಕ್ಷಿಸಲು ಹೋದ ಕಾರು ಚಾಲಕ ಮಹೇಶ್ ಸಹ ನೀರಿನ ಸೆಳೆತಕ್ಕೆ ಸಿಲುಕಿ ಜಲಸಮಾಧಿಯಾಗಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !