Wednesday, October 5, 2022

Latest Posts

ಹರಿಯಾಣದಲ್ಲಿ ದಾರುಣ ಘಟನೆ: ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ 6 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹರ್ಯಾಣದಲ್ಲಿ ನಡೆದಿದೆ. ಅವರ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳದಲ್ಲಿ ಪೊಲೀಸ್‌ ಅಧಿಕಾರಿಗಳಿಗೆ ಡೆತ್‌ನೋಟ್‌ ಸಿಕ್ಕಿದೆ.

ಶುಕ್ರವಾರ ಬೆಳಗ್ಗೆ ಹರಿಯಾಣ ರಾಜ್ಯದ ಅಂಬಾಲಾದ ಬಾಲಾನಾ ಗ್ರಾಮದಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು ಸಂಗತ್ ರಾಮ್ (65) ಮತ್ತು ಅವರ ಪತ್ನಿ ಮಹೀಂದ್ರಾ ಕೌರ್, ಸುಖ್ವಿಂದರ್ ಸಿಂಗ್ (34) ಮತ್ತು ಅವರ ಪತ್ನಿ ರೀನಾ ಎಂದು ಗುರುತಿಸಲಾಗಿದೆ. ಮೃತರಲ್ಲಿ ಸುಖ್ವಿಂದರ್ ಸಿಂಗ್ ಅವರ ಇಬ್ಬರು ಪುತ್ರಿಯರಾದ ಆಶು (5) ಮತ್ತು ಜಸ್ಸಿ (7) ಸೇರಿದ್ದಾರೆ.

ಸ್ಥಳೀಯರಿಂದ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅವರ ಸಾವಿಗೆ ಕಾರಣವೇನು ಎಂಬುದರ ಕುರಿತು ತನಿಖೆ ನಡೆಸಲಾಗಿದೆ. ಈ ಕುರಿತು ಅಂಬಾಲಾ ಎಎಸ್ಪಿ ಜೋಗಿಂದರ್ ಶರ್ಮಾ ಮಾತನಾಡಿ, ಘಟನೆ ನಡೆದ ಸ್ಥಳದಿಂದ ಆತ್ಮಹತ್ಯಾ ಪತ್ರವನ್ನು ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!