August 4, 2026
Tuesday, August 4, 2026
spot_img

ಮಲಪ್ಪುರಂನಲ್ಲಿ ದುರಂತ: ವ್ಯೂಪಾಯಿಂಟ್‌ನಲ್ಲಿ ಸಿಡಿಲು ಬಡಿದು ನಾಲ್ವರು ವಿದ್ಯಾರ್ಥಿಗಳು ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಗುಡುಗು ಸಿಡಿಲಿನ ಸಹಿತ ಭಾರೀ ಮಳೆಯಾಗುತ್ತಿದೆ. ಜಿಲ್ಲೆಯ ಮಂಕಡದ ವ್ಯೂ ಪಾಯಿಂಟ್ ನಲ್ಲಿ ಸಿಡಿಲು ಬಡಿದು ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.

ಮೃತರನ್ನು ರಹೀಸ್(20), ಫಹಾದ್(19), ಬಹಾಸ್(18) ಮತ್ತು ಜಿಯಾದ್(18) ಎಂದು ಗುರುತಿಸಲಾಗಿದೆ.

ಇಂದು ಸಂಜೆ ಪಂತಲ್ಲೂರು ಬೆಟ್ಟದಲ್ಲಿ ಈ ಭೀಕರ ದುರಂತ ಸಂಭವಿಸಿದ್ದು, ಒಟ್ಟು ಏಳು ವಿದ್ಯಾರ್ಥಿಗಳಿಗೆ ಸಿಡಿಲು ಬಡಿದಿದೆ. ಮೂವರು ವಿದ್ಯಾರ್ಥಿಗಳು ಮಂಜೇರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !