ಮಂಗಳೂರಿನಲ್ಲಿ ದುರಂತ: ನಿರ್ಮಾಣ ಹಂತದ ಕಟ್ಟಡ ಬಳಿ ಭೂ ಕುಸಿತ, ಓರ್ವನ ಸ್ಥಿತಿ ಗಂಭೀರ

ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನಿರ್ಮಾಣ ಹಂತದ ಕಟ್ಟಡವೊಂದರ ಬಳಿ ಭೂ ಕುಸಿತ ಉಂಟಾಗಿ ಕಾರ್ಮಿಕರಿಬ್ಬರು ಮಣ್ಣಿನಡಿ ಸಿಲುಕಿದ ಘಟನೆ ಬುಧವಾರ ನಗರದ ಬಲ್ಮಠ ಎಂಬಲ್ಲಿ ನಡೆದಿದೆ.
ಮೂಲತಃ ಬಿಹಾರ ಕಾರ್ಮಿಕ ರಾಜಕುಮಾರ್ (18) ಹಾಗೂ ಉತ್ತರ ಪ್ರದೇಶದ ಚಂದನ್ ಕುಮಾರ್(30) ಎಂದು ಗುರುತಿಸಲಾಗಿದೆ. ಈ ಪೈಕಿ ರಾಜಕುಮಾರ್ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಂದನ್ ಕುಮಾರ್ ಸ್ಥಿತಿ ಚಿಂತಾಜನಕವಾಗಿದೆ.
ಅಗ್ನಿಶಾಮಕ ದಳ, ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮೂಲಕ ಕಾರ್ಯಾಚರಣೆ ನಡೆದಿದ್ದು, ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮೇಯರ್ ಸುಧೀರ್ ಶೆಟ್ಟಿ ಮತ್ತು ಇತರೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!