ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆ ನರ್ಮದಾ ನದಿಯ ಬಾರ್ಗಿ ಅಣೆಕಟ್ಟೆಯ ಬಳಿ ಪ್ರವಾಸಿಗರಿದ್ದ ಕ್ರೂಸ್ ದೋಣಿ ಮುಳುಗಿ ಕನಿಷ್ಠ 4 ಜನರು ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿರುವ ಘಟನೆ ನಡೆದಿದೆ.
ಸುಮಾರು 30ಕ್ಕೂ ಹೆಚ್ಚು ಪ್ರವಾಸಿಗರಿಂದ ತುಂಬಿದ್ದ ಈ ದೋಣಿಯು ಹಠಾತ್ ಸಂಭವಿಸಿದ ಚಂಡಮಾರುತ ಹಾಗೂ ಬಿರುಗಾಳಿಯಿಂದ ನದಿಯಲ್ಲಿ ನಿಯಂತ್ರಣ ಕಳೆದುಕೊಂಡು ಮಗುಚಿದೆ ಎಂದು ಹೇಳಲಾಗುತ್ತಿದೆ.
ಬೋಟ್ನಲ್ಲಿದ್ದ ಸುಮಾರು 18 ಜನರನ್ನು ರಕ್ಷಿಸಲಾಗಿದ್ದು, ಇನ್ನೂ 15-18 ಜನರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಬರಗಿ ಪಟ್ಟಣ) ಅಂಜುಲ್ ಮಿಶ್ರಾ ಮಾಹಿತಿ ನೀಡಿದ್ದಾರೆ. ಪೊಲೀಸರು ಮತ್ತು ರಾಜ್ಯ ವಿಪತ್ತು ಸ್ಪಂದನಾ ಪಡೆ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.



