ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಚೇತೇಶ್ವರ್ ಪೂಜಾರ ಪತ್ನಿ ಪೂಜಾ ಪಬಾರಿ ಅವರ ಸಹೋದರ ಜೀತ್ ಪಬಾರಿ ರಾಜಕೋಟ್ ನಲ್ಲಿರುವ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಜೀತ್ ಪಬಾರಿ ವಿರುದ್ಧ 2024ರಲ್ಲಿ ಒತ್ತಾಯಪೂರ್ವಕ ದೈಹಿಕ ಸಂಪರ್ಕ ಆರೋಪದ ಪ್ರಕರಣ ದಾಖಲಾಗಿತ್ತು ಎಂಬ ಮಾಹಿತಿಯೂ ಹೊರಬಂದಿದೆ.
ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಕುಟುಂಬಸ್ಥರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಈ ದುರ್ಘಟನೆ ನಡೆದ ಸಮಯದಲ್ಲಿ ಪೂಜಾರ ಅವರು ಭಾರತ–ದಕ್ಷಿಣ ಆಫ್ರಿಕಾ ಪಂದ್ಯಕ್ಕೆ ಕಾಮೆಂಟ್ರಿ ನೀಡುತ್ತಿದ್ದರು.

