ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಬಳಿ ಸಂಭವಿಸಿದ ಭೀಕರ ಟ್ರ್ಯಾಕ್ಟರ್ ಅಪಘಾತದಲ್ಲಿ ತಾಯಿ ಮತ್ತು ಇಬ್ಬರು ಪುಟ್ಟ ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಾಂಡಾ ನಿವಾಸಿಗಳಾದ ರುಕ್ಮಿಣಿ ಬಾಯಿ ನಾಯಕ್ (36), ಮಗಳು ಶಿವಾನಿ ನಾಯಕ್ (6) ಮತ್ತು ಮಗ ರೋಷನ್ ನಾಯಕ್ (4) ಸಾವನ್ನಪ್ಪಿದ ದುರ್ದೈವಿಗಳು.
ಕಬ್ಬು ಕಟಾವು ಕೆಲಸಕ್ಕಾಗಿ ಐವರು ಕಾರ್ಮಿಕರು ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದಾಗ, ಇದ್ದಕ್ಕಿದ್ದಂತೆ ಟ್ರ್ಯಾಕ್ಟರ್‌ನ ‘ಹುಕ್’ ಕಟ್ ಆಗಿದೆ. ಇದರಿಂದಾಗಿ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಪಲ್ಟಿ ಹೊಡೆದಿದೆ. ಘಟನಾ ಸ್ಥಳಕ್ಕೆ ಅಮೀನ್ಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



