ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಅಬ್ಬೇನಹಳ್ಳಿ ಭೀಕರ ಅಪಘಾತ ಅಂಭಾವಿಸಿದ್ದು ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನಿಂದ ಚೆನ್ನೈ ಕಡೆಗೆ ಸಾಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಸೇತುವೆಯಿಂದ ಕೆಳಗೆ ಉರುಳಿದ ಪರಿಣಾಮ ಈ ದುರಂತ ಸಂಭವಿಸಿದೆ.
ಮೃತರನ್ನು ಚೆನ್ನೈ ಮೂಲದ ಗೋಪಿ (38), ಗೌತಮ್ ರಮೇಶ್ (28), ಹರಿಹರನ್ (27) ಮತ್ತು ಜಯಂಕರ್ (30) ಎಂದು ಗುರುತಿಸಲಾಗಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾದ ಪರಿಣಾಮ ನಾಲ್ವರೂ ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಕೋಲಾರದ ಆರ್ ಎಲ್ ಜಾಲಪ್ಪ ಆಸ್ಪತ್ರೆಗೆ ಸಾಗಿಸಿದರೂ, ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.
ಘಟನೆಯ ಮಾಹಿತಿ ಲಭಿಸಿದ ಕೂಡಲೇ ಮಾಲೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣ ಪತ್ತೆಹಚ್ಚಲು ಪ್ರಕರಣವನ್ನು ದಾಖಲಿಸಿ ತನಿಖೆ ಆರಂಭಿಸಲಾಗಿದೆ.

