ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ದುರಂತ; ತಂದೆ, ಮಗ ದುರ್ಮರಣ

ಹೊಸದಿಗಂತ ವರದಿ ರಾಮನಗರ
ಕುಂಬಾಪುರ ಗೇಟ್ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಭೀಕರ ಅಪಘಾತ ಸಂಭವಿಸಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ  ತಂದೆ, ಮಗ ಅವಘಡದಲ್ಲಿ ಮೃತಪಟ್ಟಿದ್ದಾರೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಅಗಸನಪುರ ಗ್ರಾಮದ ಸುದರ್ಶನ್(40), ಮಗ ತನ್ಮಯ್(2) ಮೃತಪಟ್ಟವರು. ಕುಟುಂಬ ಸಮೇತ ಹಬ್ಬಕ್ಕೆ ಊರಿಗೆ ತೆರಳಿದ್ದ ಸುದರ್ಶನ್​, ಕಾರಿನಲ್ಲಿ ಬೆಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ಸುದರ್ಶನ್ ಪತ್ನಿ ಶೀಲಾ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರಿನಲ್ಲಿದ್ದ ಮತ್ತಿಬ್ಬರು ಹೆಣ್ಣುಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!