November 10, 2026
Tuesday, November 10, 2026
spot_img

ಹಬ್ಬದ ಸಮಯದಲ್ಲಿಯೇ ದುರಂತ: ಪಟಾಕಿ ಬ್ಲಾಸ್ಟ್ ಬೆನ್ನಲ್ಲೇ ಕಾಂಕ್ರೀಟ್ ಸ್ಲ್ಯಾಬ್ ಕುಸಿತ, ಬಾಲಕ ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮಹಾರಾಷ್ಟ್ರದ ಮುಂಬೈನ ಮಾಲಾಡ್ ವೆಸ್ಟ್ ಪ್ರದೇಶದಲ್ಲಿ ದೀಪಾವಳಿ ಹಬ್ಬದ ಪಟಾಕಿ ಸ್ಫೋಟಗೊಂಡು, ಅಂಗಡಿಯೊಂದರ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ 16 ವರ್ಷದ ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಹಬ್ಬದ ಸಂದರ್ಭದಲ್ಲಿ ಮಾಲಾಡ್ ವೆಸ್ಟ್ ಭಾಗದ ಅಂಗಡಿಯೊಂದರ ಬಳಿ ಆಕಸ್ಮಿಕವಾಗಿ ಭಾರೀ ಪ್ರಮಾಣದ ಪಟಾಕಿ ಸ್ಫೋಟ ಸಂಭವಿಸಿದೆ. ಈಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ, ಪಕ್ಕದಲ್ಲೇ ಇದ್ದ ಅಂಗಡಿಯ ಮೇಲಿನ ಕಾಂಕ್ರೀಟ್ ಸ್ಲ್ಯಾಬ್ ಸಂಪೂರ್ಣವಾಗಿ ಕುಸಿದು ಬಿದ್ದಿದೆ.

ಸ್ಲ್ಯಾಬ್ ಕುಸಿಯುತ್ತಿದ್ದಂತೆ ಅಲ್ಲಿಯೇ ಇದ್ದ 16 ವರ್ಷದ ಬಾಲಕ ಅದರ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರಿಂದ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:

ಘಟನೆ ನಡೆದ ತಕ್ಷಣ ಸ್ಥಳೀಯರು ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಅವಶೇಷಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಹಬ್ಬದ ಸಂಭ್ರಮದ ನಡುವೆ ನಡೆದ ಈ ದುರಂತವು ಬಾಲಕನ ಕುಟುಂಬದಲ್ಲಿ ಸೂತಕದ ಛಾಯೆ ಆವರಿಸಿದೆ.

Must Read

Skip to toolbar