April 19, 2026
Sunday, April 19, 2026
spot_img

ದರ್ಗಾಗೆ ಬಂದಿದ್ದಾಗ ದುರಂತ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ 6 ಮಂದಿ ಜಲಸಮಾಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೋಜಿಗಾಗಿ ನದಿಗೆ ಇಳಿದ ಕ್ಷಣ ದುರಂತವಾಗಿ ಮಾರ್ಪಟ್ಟ ಘಟನೆ ಮೈಸೂರಿನ ಕೆ.ಆರ್ ನಗರ ಸಮೀಪ ನಡೆದಿದೆ. ಅರ್ಕೇಶ್ವರ ದೇವಾಲಯದ ಬಳಿ ಕಾವೇರಿ ನದಿಯಲ್ಲಿ ಈಜಲು ಇಳಿದಿದ್ದವರಲ್ಲಿ ಆರು ಮಂದಿ ನೀರಿನ ಪ್ರವಾಹಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.

ಮಾಹಿತಿಯ ಪ್ರಕಾರ, ದರ್ಗಾಕ್ಕೆ ಭೇಟಿ ನೀಡಲು ಬಂದಿದ್ದ ಮುಸ್ಲಿಂ ಕುಟುಂಬದ ಎಂಟು ಮಂದಿ ನದಿಗೆ ಇಳಿದಿದ್ದರು. ಈ ವೇಳೆ ನೀರಿನ ವೇಗ ಹೆಚ್ಚಾಗಿ, ಆರು ಮಂದಿ ನಿಯಂತ್ರಣ ತಪ್ಪಿ ಮುಳುಗಿದ್ದಾರೆ. ಸ್ಥಳೀಯರು ತಕ್ಷಣ ಧಾವಿಸಿ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ.

ಮೃತರನ್ನು ಯಾಸಿನ್ (23), ಫಾತಿಮ್ (30), ನೇಹಾನ್ (19), ಅಲೀಂ (13), ಹುಮಾಯೂನ್ (7) ಮತ್ತು ವರ್ಷ ಎಂದು ಗುರುತಿಸಲಾಗಿದೆ. ಘಟನೆಯಿಂದ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.

ಇದನ್ನೂ ಓದಿ:

ಘಟನೆ ಬಗ್ಗೆ ಮಾಹಿತಿ ಪಡೆದ ಕೆ.ಆರ್‌ ನಗರ ಪೊಲೀಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯರು ನದಿಯ ಅಪಾಯಕಾರಿ ಪ್ರದೇಶಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕಡ್ಡಾಯಗೊಳಿಸಲು ಆಗ್ರಹಿಸಿದ್ದು, ಇಂತಹ ದುರಂತಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲು ಒತ್ತಾಯಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !