ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ದಂಪತಿ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಹೊರವಲಯದಲ್ಲಿ ಸಂಭವಿಸಿದೆ.
ನಾಗನೂರ ಗ್ರಾಮದ ನಿವಾಸಿಗಳಾದ ಮುತ್ತಪ್ಪ ಶ್ರೀಶೈಲ ಮುಗೋಳಖೋಡ (42) ಹಾಗೂ ಅವರ ಪತ್ನಿ ರಾಜಶ್ರೀ ಮುಗೋಳಖೋಡ (36) ಮೃತಪಟ್ಟ ದುರ್ದೈವಿಗಳು.
ಸ್ಥಳದಲ್ಲೇ ಕೊನೆಯುಸಿರು:
ದಂಪತಿ ಎಂದಿನಂತೆ ತಮ್ಮ ಹೊಲದಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿದೆ. ವಿದ್ಯುತ್ ಪ್ರವಹಿಸಿದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮೂಡಲಗಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:
ಕುಟುಂಬಸ್ಥರ ಆಕ್ರಂದನ:
ಕಣ್ಣೆದುರೇ ದಂಪತಿ ಪ್ರಾಣ ಕಳೆದುಕೊಂಡಿರುವುದರಿಂದ ಮೃತರ ಕುಟುಂಬಸ್ಥರು ಹಾಗೂ ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆಗೆ ಸಂಬಂಧಿಸಿದಂತೆ ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣವೇ ಎಂಬ ಶಂಕೆ ವ್ಯಕ್ತವಾಗಿದ್ದು,ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



