ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇವರನಾಡು ಕೇರಳದಲ್ಲಿ ಸಂಭವಿಸಿದ ಭೂಕುಸಿತ ದುರಂತದಲ್ಲಿ ಇದುವರೆಗೂ 143ಕ್ಕೂ ಹೆಚ್ಚು ಮಂದಿ ಮೃತಪಟ್ಟಿರಿದ್ದಾರೆ. ಅದರಲ್ಲೂ ಕೇರಳದಲ್ಲಿ ಬದುಕು ಕಟ್ಟಿಕೊಂಡಿದ್ದ ಕರ್ನಾಟಕದ ನಾಲ್ವರು ಭೂಕುಸಿತಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ.
ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿರುವ ಭೂಕುಸಿತದಲ್ಲಿ ಕರ್ನಾಟಕದ ನಾಲ್ವರು ಮೃತಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆಯ ಇರಸವಾಡಿ ಗ್ರಾಮದ ರಾಜೇಂದ್ರ (50), ರತ್ನಮ್ಮ (45), ಪುಟ್ಟಸಿದ್ದಶೆಟ್ಟಿ (62), ರಾಣಿ (50 ಮೃತಪಟ್ಟಿದ್ದಾರೆ. ಸದ್ಯ ಪುಟ್ಟಸಿದ್ದಶೆಟ್ಟಿ ಹಾಗೂ ರಾಣಿ ಎಂಬುವವರ ಮೃತದೇಹಗಳನ್ನು ರಕ್ಷಣಾ ಪಡೆಗಳು ಹೊರತೆಗೆದಿದ್ದಾರೆ.
ತ್ರಯಂಬಕಪುರದ ಸ್ವಾಮಿಶೆಟ್ಟಿ ಎಂಬುವವರು ಗಾಯಗೊಂಡಿದ್ದಾರೆ. ವಯನಾಡು ಜಿಲ್ಲೆಯ ಮೆಪ್ಪಾಡಿಯ ವೈತ್ರಿ ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಗುಂಡ್ಲುಪೇಟೆ ತಹಸೀಲ್ದಾರ್ ರಮೇಶ್ ಬಾಬು ನೇತೃತ್ವದಲ್ಲಿ ರಕ್ಷಣಾ ಕಾರ್ಯ ನಡೆದಿದ್ದು ಮೃತರ ಕುಟುಂಬಸ್ಥರೊಂದಿಗೆ ಸಂಪರ್ಕದಲ್ಲಿದ್ದಾರೆ.