ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೋಟೆಲ್‌ನಲ್ಲಿ ಸಂಭವಿಸಿದ ಲಿಫ್ಟ್ ಅವಘಡದಲ್ಲಿ 22 ವರ್ಷದ ಯುವಕ ಮೃತಪಟ್ಟಿರುವ ಘಟನೆ ಜಯನಗರದಲ್ಲಿ ನಡೆದಿದೆ. ಘಟನೆ ಬಳಿಕ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಧಾರವಾಡ ಮೂಲದ ರಾಜೇಶ್ ಹೋಟೆಲ್ ವ್ಯವಹಾರ ಕಲಿಯುವ ಉದ್ದೇಶದಿಂದ ಅಲ್ಲಿಗೆ ಬಂದಿದ್ದರು. ಈ ವೇಳೆ ಸರಕು ಸಾಗಿಸುವ ಲಿಫ್ಟ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ತಲೆ-ಕುತ್ತಿಗೆ ಭಾಗ ಲಿಫ್ಟ್ ಡೋರ್‌ಗೆ ಸಿಲುಕಿದ್ದು, ಗಂಭೀರ ಗಾಯಗಳಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:
ಘಟನೆ ಬಳಿಕ ಹೋಟೆಲ್ ಅನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದ್ದು, ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಿಫ್ಟ್‌ನ ತಾಂತ್ರಿಕ ದೋಷವೇ ಅಥವಾ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



