ಹೊಸದಿಗಂತ ವರದಿ ಮಂಡ್ಯ :
ಮಳವಳ್ಳಿ ತಾಲೂಕು, ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ ನಡೆದಿದೆ.
ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದ ನಿವಾಸಿ ಪ್ರಹ್ಲಾದ್ (21) ಮೃತಪಟ್ಟ ಯುವಕ.
ಪ್ರಹ್ಲಾದ್ ತನ್ನ ಸ್ನೇಹಿತರೊಂದಿಗೆ ಮುತ್ತತ್ತಿ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಪ್ರವಾಸ ಬಂದಿದ್ದನು. ಕಾವೇರಿ ನದಿಯಲ್ಲಿ ಈಜಲು ಹೋದಾಗ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾನೆ. ನುರಿತ ಈಜುಗಾರರ ಸಹಾಯದಿಂದ ಯುವಕನ ಮೃತದೇಹವನ್ನು ಹೊರತೆಗೆಯಲಾಯಿತು.
ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈಜಲು ಹೋದವನ ದುರಂತ ಅಂತ್ಯ: ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಯುವಕ

