ಹೊಸದಿಗಂತ ವರದಿ ಶ್ರೀರಂಗಪಟ್ಟಣ :
ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ವ್ಯಕ್ತಿಯೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಮಹದೇವಪುರದ ಕಾವೇರಿ ಬೋರೇ ದೇವರ ದೇವಾಲಯದ ಬಳಿ ನಡೆದಿದೆ.
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಗಾಗೇನಹಳ್ಳಿ ಗ್ರಾಮದ ಮಹೇಶ ವೀರಜಪ್ಪ(35) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.
ಮಹೇಶಮೈಸೂರು ವಿಕ್ರಾಂತ್ ಕಾರ್ಖಾನೆಯಲ್ಲಿ ಕೆಲಸ ಮಾಡುತಿದ್ದು, ಮಹದೇವಪುರ ಬಳಿಯ ತರಿಪುರ ಗ್ರಾಮದ ಸ್ನೇಹಿತನ ಮನೆಯ ಗೃಹಪ್ರವೇಶಕ್ಕೆ ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಮಹದೇವಪುರ ಗ್ರಾಮದ ಬಳಿಯ ರಾಜ ಪರಮೇಶ್ವರಿ ನಾಲೆ ಅಣೆಕಟ್ಟೆಯಲ್ಲಿ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಪೊಲೀಸರು ಹಾಗೂ ಸ್ಥಳೀಯರು ಮೃತನ ಶವಕ್ಕಾಗಿ ಶೋಧಕಾರ್ಯ ನಡೆಸಿ, ಮೃತದೇಹವನ್ನು ನೀರಿನಿಂದ ಹೊರ ತೆಗೆದು ಪೋಷಕರಿಗೆ ನೀಡಿದ್ಧಾರೆ. ಈ ಸಂಬಂಧ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.