ಕೆರೆ ಬಳಿ ನ್ಯೂ ಇಯರ್‌ ಪಾರ್ಟಿ ಮಾಡಿದ್ದ ಯುವಕರ ದುರಂತ ಅಂತ್ಯ: ಆಗಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹೊಸ ವರ್ಷದ ಆಚರಣೆ ಮಾಡುವ ವೇಳೆ ಇಬ್ಬರು ಯುವಕರು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಹಾಸನದ ಜಿಲ್ಲೆಯಲ್ಲಿ ನಡೆದಿದೆ.

ಬೇಲೂರು ತಾಲೂಕಿನ ಮಲಸಾವರ ಗ್ರಾಮದ ಲಕ್ಷ್ಮಿಪುರ ಬಡಾವಣೆಯ ನಿವಾಸಿಗಳಾದ ಅಜಿತ್ (30 ) ಹಾಗೂ ಅಶೋಕ್ (35) ಮೃತಪಟ್ಟವರು.

ಮಂಗಳವಾರ ರಾತ್ರಿ ಹೊಸ ವರ್ಷದ ಆಚರಣೆಗೆ ಬೇಲೂರಿನ ಮಲಸಾವರ ಗ್ರಾಮದ ಲಕ್ಷ್ಮಿಪುರ ಕೆರೆ ಏರಿಯ ಮೇಲೆ ಯುವಕರು ಪಾರ್ಟಿ ಮಾಡಿದ್ದಾರೆ. ಆದರೆ, ಬುಧವಾರ ಬೆಳಿಗ್ಗೆಯಾದರೂ ಮನೆಗೆ ಯುವಕರು ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಕೆರೆಯ ಏರಿಯ ಮೇಲೆ ವಾಹನ, ಚಪ್ಪಲಿಗಳು ಕಂಡು ಬಂದಿವೆ.

ಈ ಬಗ್ಗೆ ಸಂಶಯಗೊಂಡ ಗ್ರಾಮಸ್ಥರು ಅಗ್ನಿಶಾಮಕ ಹಾಗೂ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಸಿಬ್ಬಂದಿ, ಕೆರೆಯಲ್ಲಿ ಶೋಧಕಾರ್ಯ ನಡೆಸಿದ್ದು, ಸಂಜೆ ವೇಳೆಗೆ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಈ ಬಗ್ಗೆ ಅರೇಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಘಟನೆ ಕುರಿತಂತೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!