ಮಂಡ್ಯದ ಬೇಬಿ ಬೆಟ್ಟದಲ್ಲಿ ಇಂದಿನಿಂದ ಟ್ರಯಲ್ ಬ್ಲಾಸ್ಟ್: ರೈತರ ಪ್ರತಿಭಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ವಿರೋಧದ ನಡುವೆಯೂ ಪಾಂಡವಪುರದ ಬೇಬಿ ಬೆಟ್ಟದಲ್ಲಿ ಇಂದಿನಿಂದ ನಾಲ್ಕು ದಿನ ಟ್ರಯಲ್ ಬ್ಲಾಸ್ಟ್ ನಡೆಯಲಿದೆ.

ಈಗಾಗಲೇ ಹೊರ ರಾಜ್ಯದ ತಜ್ಞರ ತಂಡ ಕೆಆರ್‌ಎಸ್‌ನ ಹೊಟೇಲ್‌ನಲ್ಲಿ ವಾಸ್ತವ್ಯ ಹೂಡಿದೆ. ಆದರೆ ಟ್ರಯಲ್ ಬ್ಲಾಸ್ಟ್‌ಗೆ ಭಾರೀ ವಿರೋಧ ವ್ಯಕ್ತವಾಗಿದೆ.

ಹೊರ ರಾಜ್ಯದ ತಜ್ಞರು ಈಕೂಡಲೆ ವಾಪಾಸ್ ಹೋಗಬೇಕು ಎಂದು ರೈತರು ಕೆಆರ್‌ಎಸ್ ಬೃಂದಾವನದ ಮುಖ್ಯದ್ವಾರದ ರಸ್ತೆಯಲ್ಲಿ ಗೋ ಬ್ಯಾಕ್ ಚಳವಳಿ ನಡೆಸುತ್ತಿದ್ದಾರೆ.

ಕೆಆರ್‌ಎಸ್ ಡ್ಯಾಮ್‌ನಿಂದ ಐದಾರು ಕಿಲೋಮೀಟರ್ ದೂರದಲ್ಲಿರುವ ಬೇಬಿಬೆಟ್ಟದಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಇದರಿಂದ ಡ್ಯಾಂಗೆ ಹಾನಿಯಾಗುತ್ತದೆ ಎಂದು ರೈತರು ಪ್ರತಿಭಟನೆ ನಡೆಸಿದ ಹಿನ್ನೆಲೆ ಡ್ಯಾಂನ ೨೦ ಕಿ.ಮೀ ಸುತ್ತಮುತ್ತ ಗಣಿಗಾರಿಕೆ ನಿಷೇಧಿಸಲಾಗಿತ್ತು.

ಇದೀಗ ಬೇಬಿ ಬೆಟ್ಟದಲ್ಲಿ ಬ್ಲಾಸ್ಟ್ ಮಾಡಿದರೆ ಡ್ಯಾಂಗೆ ನಿಜವಾಗಿಯೂ ಹಾನಿಯಾಗುತ್ತಾ ಎಂದು ತಿಳಿಯಲು ಹೈಕೋರ್ಟ್ ಟ್ರಯಲ್ ಬ್ಲಾಸ್ಟ್ ನಡೆಸಲು ಅವಕಾಶ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!