ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ನಿನ್ನೆ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ.
ರೈಲು ಅಪಘಾತದಲ್ಲಿ ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಮೃತಪಟ್ಟ 14 ಮಂದಿಯ ಕುಟುಂಬಗಳಿಗೆ ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಶಿಸಿದೆ.
ಗಾಯಾಳುಗಳಿಗೆ ಎರಡು ಲಕ್ಷ ರೂಪಾಯಿ, ಬೇರೆ ರಾಜ್ಯದ ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿ ಹಾಗೂ ಬೇರೆ ರಾಜ್ಯದ ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಸಿಎಂ ಜಗನ್‌ಮೋಹನ್ ರೆಡ್ಡಿ ಘೋಷಿಸಿದ್ದಾರೆ.
ವಿಜವಾಡ-ಜಾರ್ಸುಗೂಡ ರೈಲು, ಮಂಗಳೂರು ಸೆಂಟ್ರಲ್- ಸಂತ್ರಾಗಚ್ಚಿ ಎಕ್ಸ್‌ಪ್ರೆಸ್ ಹಾಗೂ ಬೆಂಗಳೂರು-ಜಾಸಿದಿಹ್ ಎಕ್ಸ್‌ಪ್ರೆಸ್ ರೈಲಿನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.
ವಿಶಾಖಪಟ್ಟಣಂ-ರಾಜಘಡ ಪ್ಯಾಸೆಂಜರ್ ರೈಲಿನಲ್ಲಿ ಮಾನವ ದೋಷ ಅಥವಾ ಸಿಗ್ನಲ್‌ನ ಓವರ್‌ಶೂಟ್‌ನಿಂದಾಗಿ ಅಪಘಾತ ಸಂಭವಿಸಿರಬಹುದು ಎನ್ನಲಾಗಿದೆ. ರೈಲು ಅಪಘಾತದ ಬಗ್ಗೆ ಪ್ರಧಾನಿ ಮೋದಿ ಕೂಡ ಟ್ವೀಟ್ ಮಾಡಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹೇಳಿದ್ದಾರೆ.