September 24, 2026
Thursday, September 24, 2026
spot_img

ಆಂಧ್ರಪ್ರದೇಶದಲ್ಲಿ ರೈಲು ಅಪಘಾತ: ನಾಲ್ವರು ವಿದ್ಯಾರ್ಥಿಗಳು ದುರ್ಮ*ರಣ, ಓರ್ವನ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಟೆಕ್ಕಲಿ ಮಂಡಲದ ಬಳಿ ಬುಧವಾರ ಭೀಕರ ರೈಲು ದುರಂತ ಸಂಭವಿಸಿದೆ. ವೇಗವಾಗಿ ಬಂದ ರಾಜ್ಯರಾಣಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಮತ್ತೊಬ್ಬ ವಿದ್ಯಾರ್ಥಿ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ಚಿಕಿತ್ಸೆಗಾಗಿ ಟೆಕ್ಕಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಳಿ ಮೇಲೆ ನಡೆದು ಹೋಗುತ್ತಿದ್ದಾಗ ದುರಂತ

ಲಭ್ಯವಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ವಿದ್ಯಾರ್ಥಿಗಳು ರೈಲ್ವೆ ಹಳಿಗಳ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಬೆರ್ಹಾಂಪುರದಿಂದ ಗುಣುಪುರಕ್ಕೆ ಸಂಚರಿಸುತ್ತಿದ್ದ ರಾಜ್ಯರಾಣಿ ಎಕ್ಸ್‌ಪ್ರೆಸ್ ರೈಲು ಇವರಿಗೆ ಡಿಕ್ಕಿ ಹೊಡೆದಿದೆ. ಮೃತಪಟ್ಟ ಯುವಕರೆಲ್ಲರೂ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.

ಇದನ್ನೂ ಓದಿ:

ಕೇಂದ್ರ ಸಚಿವ ಕೆ. ರಾಮ್ ಮೋಹನ್ ನಾಯ್ಡು ಸಂತಾಪ

ಈ ದುರಂತದ ಕುರಿತು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ್ಡು ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ರೈಲ್ವೆ ಹಾಗೂ ಕಂದಾಯ ಇಲಾಖೆಯ ಉನ್ನತ ಅಧಿಕಾರಿಗಳನ್ನು ಸಂಪರ್ಕಿಸಿದ ಅವರು ಘಟನೆಯ ಸಂಪೂರ್ಣ ವಿವರಗಳನ್ನು ಪಡೆದುಕೊಂಡಿದ್ದಾರೆ. ಮೃತ ವಿದ್ಯಾರ್ಥಿಗಳಿಗೆ ಸಂತಾಪ ಸೂಚಿಸಿರುವ ಸಚಿವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುವಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಸದ್ಯ ಈ ಘಟನಾ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Must Read