ಗ್ರೀಸ್‌ನಲ್ಲಿ ರೈಲುಗಳ ಆಕ್ಸಿಡೆಂಟ್ : ಸಾವಿನ ಸಂಖ್ಯೆ 57ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯ ಗ್ರೀಸ್‌ನಲ್ಲಿ ಎರಡು ರೈಲುಗಳ ನಡುವೆ ಡಿಕ್ಕಿಯಾಗಿದ್ದು, ಮೃತಪಟ್ಟವರ ಸಂಖ್ಯೆ 57ಕ್ಕೆ ಏರಿಕೆಯಾಗಿದೆ.

ಅಪಘಾತದಲ್ಲಿ 48ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಆರು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ.

ಅಥೆನ್ಸ್‌ನಿಂದ ಥೆಸ್ಸಾಲೊನಿಕಿ ನಗರಕ್ಕೆ ಹೊರಟಿದ್ದ ರೈಲು ಹಾಗೂ ಸರಕು ಸಾಗಣೆ ರೈಲಿನ ನಡುವೆ ಡಿಕ್ಕಿ ಸಂಭವಿಸಿದ್ದು, ರಭಸಕ್ಕೆ ಕೆಲ ಭೋಗಿಗಳು ಹಳಿತಪ್ಪಿದ್ದವು, ಮೂರು ಬೋಗಿಗಳಿಗೆ ಬೆಂಕಿ ತಗುಲಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!