Monday, October 3, 2022

Latest Posts

ಮಹಾರಾಷ್ಟ್ರದಲ್ಲಿ ರೈಲು ದುರಂತ: 53 ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಪ್ಯಾಸೆಂಜರ್‌ ರೈಲೊಂದು ಗೂಡ್ಸ್‌ ರೈಲಿಗೆ ಢಿಕ್ಕಿ ಹೊಡೆದ ಪರಿಣಾಮ 53ಜನರು ಗಾಯಗೊಂಡಿದ್ದಾರೆ. ಮಹಾರಾಷ್ಟ್ರದ ಗೊಂಡಿಯಾ ನಗರದಲ್ಲಿ ಈ ಘಟನೆ ನಡೆದಿದ್ದು ಭಗತ್ ಕಿ ಕೋಥಿ ಎಂಬ ಪ್ಯಾಸೆಂಜರ್ ರೈಲು ಸಿಗ್ನಲ್ ಸ್ವೀಕರಿಸಲು ವಿಫಲವಾದ ಕಾರಣ ಈ ಘಟನೆ ಜರುಗಿದೆ.

ಪ್ಯಾಸೆಂಜರ್ ರೈಲು ರಾಯ್‌ಪುರದಿಂದ ನಾಗ್ಪುರಕ್ಕೆ ತೆರಳುತ್ತಿತ್ತು. ಬುಧವಾರ ಮುಂಜಾನೆ 2.30ರ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ರೈಲಿನ ಎಸ್ 3 ಬೋಗಿಗಳು ಹಳಿತಪ್ಪಿವೆ. 53 ಮಂದಿ ಗಾಯಗೊಂಡಿದ್ದು ಅವರಲ್ಲಿ 13 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡ ಪ್ರಯಾಣಿಕರನ್ನು ಗೊಂಡಿಯಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಕೆಲವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡೂ ರೈಲುಗಳು ಒಂದೇ ದಿಕ್ಕಿನಲ್ಲಿ ಅಂದರೆ ನಾಗ್ಪುರ ಕಡೆಗೆ ಹೋಗುತ್ತಿದ್ದ ಕಾರಣ ಈ ಘಟನೆ ಸಂಭವಿಸಿದೆ ಎಂದು ಮೂಲಗಳು ವರದಿ ಮಾಡಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!