ಹೊಸದಿಗಂತ ಡಿಜಿಟಲ್ ಡೆಸ್ಕ್:
2013ರಲ್ಲಿ ರೈಲು ತಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಹುಬ್ಬಳ್ಳಿ ರೈಲ್ವೇ ಪೊಲೀಸರು ಬಂಧಿಸಿದ್ದಾರೆ.
ಶಿರಸಿಯಲ್ಲಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. 2013ರಲ್ಲಿ ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ನಡೆದ ಹೋರಾಟದ ವೇಳೆ ಅವರ ನೇತೃತ್ವದ ತಂಡ ರೈಲನ್ನು ತಡೆದಿತ್ತು. ಸುಮಾರು ಆರು ಗಂಟೆಗಳ ಕಾಲ ಎಲ್ಲ ರೈಲುಗಳನ್ನು ತಡೆದು ಹೋರಾಟ ಮಾಡಲಾಗಿತ್ತು.
ಈ ಬಗ್ಗೆ ಎಫ್‌ಐಆರ್ ಕೂಡ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಹೊರಡಿಸಿದ್ದ ವಾರೆಂಟ್ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ. ಇಂದು (ಸೆ.28) ಹುಬ್ಬಳ್ಳಿ ಜೆಎಂಎಫ್‌ಸಿ ಕೋರ್ಟ್‌ಗೆ ಅವರನ್ನು ಪೊಲೀಸರು ಹಾಜರುಪಡಿಸಲಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.



