ಏಕಾಏಕಿ ಸಂಚಾರದ ನಡುವೆ ಬೇರ್ಪಟ್ಟ ರೈಲು ಬೋಗಿಗಳು: ಪ್ರಯಾಣಿಕರು ಸೇಫ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಪಲಾಸಾ ಬಳಿ ಇಂದು ವಿಶಾಖಪಟ್ಟಣಂ ಮಾರ್ಗವಾಗಿ ಪಶ್ಚಿಮ ಬಂಗಾಳದ ಶಾಲಿಮಾರ್‌ಗೆ ಪ್ರಯಾಣಿಸುತ್ತಿದ್ದ ಫಲಕ್‌ನುಮಾ ಎಕ್ಸ್‌ಪ್ರೆಸ್ ರೈಲು ಬೇರ್ಪಟ್ಟಿದೆ. ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸದೇ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದು, ರೈಲಿನಲ್ಲಿ ಯಾವುದೇ ಅಲರ್ಟ್‌ ತಿಳಿಯದೇ ಏಕಾಏಕಿ ಎರಡು ಎಸಿ ಬೋಗಿಗಳು ಬೇರ್ಪಟ್ಟಿವೆ. ಕೂಡಲೇ ಎಚ್ಚೆತ್ತ ಚಾಲಕ ತಕ್ಷಣ ರೈಲನ್ನು ನಿಲ್ಲಿಸಿ, ದೊಡ್ಡ ಅನಾಹುತ ಆಗುವುದನ್ನು ತಪ್ಪಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಲಿ‌, ಸಾವು-ನೋವಿಗಳಾಗಲಿ ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.

ಸುರಕ್ಷತೆಯ ಎಲ್ಲಾ ಪ್ರೋಟೋಕಾಲ್‌ (ಶಿಷ್ಟಾಚಾರ) ಪಾಲಿಸಿದ್ದು, ಯಾವುದೇ ಸಮಸ್ಯೆಗಳಿಲ್ಲ ಎಂದು ಖಚಿತಪಡಿಸಿಕೊಂಡ ಬಳಿಕ ರೈಲು ತನ್ನ ಪ್ರಯಾಣವನ್ನು ಪುನರಾರಂಭಿಸಿದೆ. ಆದಾಗ್ಯೂ ಏಕಾಏಕಿ ಬೋಗಿಗಳು ಬೇರ್ಪಡಲು ಕಾರಣವೇನು ಅನ್ನೋದರ ಕುರಿತು ರೈಲ್ವೇ ಅಧಿಕಾರಿಗಳು ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!