ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಂಟು ಪ್ರಯಾಣಿಕರು ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿರುವ ಆಘಾತಕಾರಿ ಘಟನೆ ಜಾಮುದ್ದೀನ್ ಎಕ್ಸ್ಪ್ರೆಸ್ ರೈಲಿನಲ್ಲಿ ನಡೆದಿದೆ. ಗೋವಾದಿಂದ ದೆಹಲಿಗೆ ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರ ಅಸ್ವಸ್ಥತೆ ಅನುಮಾನಾಸ್ಪದವಾಗಿದೆ.
ರೈಲು ಬೆಳಗಾವಿಗೆ ಬರುತ್ತಿದ್ದಂತೆ ಈ ವಿಷಯವನ್ನು ಅಲ್ಲಿ ಸ್ಟೇಷನ್ ಮಾಸ್ಟರ್ ಗಮನಕ್ಕೆ ತರಲಾಗಿದೆ. ತಕ್ಷಣವೇ ಅಲ್ಲಿದ್ದ ಪೊಲೀಸರು 8 ಪ್ರಯಾಣಿಕರನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದರು. ಅವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರೈಲಿನಲ್ಲಿ ಪ್ರಯಾಣಿಣಿಕರ ಪ್ರಜ್ಞೆ ತಪ್ಪಿದ್ದನ್ನು ಕಂಡ ಸಹ ಪ್ರಯಾಣಿಕರು ಬೆಳಗಾವಿ ರೈಲು ನಿಲ್ದಾಣ ಬರುತ್ತಿದ್ದಂತೆ ವಿಚಾರವನ್ನು ಅಲ್ಲಿನ ರೈಲ್ವೆ ಪೊಲೀಸರ ಗಮನಕ್ಕೆ ತಂದರು. ಈ ಗಟನೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಯಾವುದರಿಂದ ಘಟನೆ ನಡೆದಿದೆ? ಸಹ ಪ್ರಯಾಣಿಕರ ನೀಡಿದ ಆಹಾರ ಸೇವಿಸಿ ಈ ರೀತಿ ಆಗಿದ್ಯಾ? ಬೇರೆ ಏನಾದರೂ ಕಾರಣ ಇದ್ಯಾ? ಎಂಬ ಆಯಾಮಗಳಲ್ಲಿ ಬೆಳಗಾವಿ ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.