ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಮೆಟ್ರೋದ ನೇರಳೆ ಮಾರ್ಗದ ಸ್ವಾಮಿ ವಿವೇಕಾನಂದ ಹಾಗೂ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ನಡುವೆ ಅಗತ್ಯ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ.
ಈ ಕಾಮಗಾರಿಗಳನ್ನು ನಿರ್ವಹಿಸಲು ಭಾನುವಾರ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ವಗಿತಗೊಳಿಸಲಾಗುತ್ತದೆ.
ಅಂದು ಬೆಳಗ್ಗೆ 7 ರಿಂದ ಬೆಳಗ್ಗೆ 8ರ ವರೆಗೆ ಒಂದು ಗಂಟೆ ಕಾಲ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸಂಚಾರ ಇರುವುದಿಲ್ಲ. ಈ ಬಗ್ಗೆ ಬಿಎಂಆರ್ ಸಿಎಲ್ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದೆ.
ನೇರಳೆ ಮಾರ್ಗದಲ್ಲಿ ಜುಲೈ 06 ಭಾನುವಾರ ಬೆಳಗ್ಗೆ 7 ರಿಂದ 8ರವರೆಗೆ ಅಂದರೆ ಒಂದು ಗಂಟೆಯ ಅವಧಿಗೆ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣ ಟು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ನಡುವಿನ ಅಗತ್ಯ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲಿದೆ.
ಹೀಗಾಗಿ ಬೆಳಗ್ಗೆ 7 ರಿಂದ 8ರವರೆಗೆ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ಮಾರ್ಗದಲ್ಲಿ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತವಾಗಲಿದ್ದು, ಬೆಳಿಗ್ಗೆ 8 ರಿಂದ ಸಾಮಾನ್ಯ ರೈಲು ಸಂಚಾರ ಸೇವೆ ಎಂದಿನಂತೆ ಸಾಮಾನ್ಯವಾಗಿ ಪುನರಾರಂಭಿಸುತ್ತದೆ.