ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….
ಹೊಸದಿಗಂತ ವರದಿ, ಮೈಸೂರು:
ರೈಲ್ವೆ ಪ್ರಯಾಣಿಕರ ಬೇಡಿಕೆಗೆ ಅನುಸಾರವಾಗಿ ಮೈಸೂರು- ದಾನಪುರ ನಡುವೆ ವಿಶೇಷ ರೈಲು ಸಂಚಾರದ ವ್ಯವಸ್ಥೆಯನ್ನು ಮೈಸೂರು ರೈಲ್ವೆ ವಿಭಾಗದಿಂದ ಕಲ್ಪಿಸಲಾಗಿದೆ.
ಕರ್ನಾಟಕದ ರಾಜ್ಯದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು, ಇದರ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಮೇ 12ರತನಕ ಕರ್ಫ್ಯೂವನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಿದೆ. ಇದರಿಂದಾಗಿ ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ರಾಜ್ಯದ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು, ತಮ್ಮ ಊರುಗಳಿಗೆ ತೆರಳು ತುದಿಗಾಲಿನಲ್ಲಿ ನಿಂತಿದ್ದು, ತಮಗೆ ರೈಲು ಸಂಚಾರದ ವ್ಯವಸ್ಥೆಯನ್ನು ಮಾಡಿಕೊಡಬೇಕೆಂದು ಬೇಡಿಕೆಯನ್ನು ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಮೈಸೂರು- ದಾನಾಪುರ ನಡುವೆ ವಿಶೇಷ ರೈಲು ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ.
ಮೇ 3 ರಂದು ರಾತ್ರಿ 9.20ಕ್ಕೆ ಮೈಸೂರಿನಿಂದ ಹೊರಟು ಮೇ 5ರ ರಾತ್ರಿ 8.45ಕ್ಕೆ ಬಿಹಾರದ ದಾನಪುರ ರೈಲ್ವೆ ನಿಲ್ದಾಣಕ್ಕೆ ತಲುಪಲಿದೆ ಎಂದು ಮೈಸೂರು ರೈಲ್ವೆ ವಿಭಾಗದ ಡಿಆರ್ಎಂ ತಿಳಿಸಿದ್ದಾರೆ.