ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಗೊಂಡಾದಲ್ಲಿ ಚಂಡೀಗಢ-ದಿಬ್ರುಗಢ ಎಕ್ಸ್ಪ್ರೆಸ್ ರೈಲು ಅಪಘಾತಕ್ಕೆ ಒಳಗಾಗಿ ಇಬ್ಬರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ.
ಉತ್ತರ ಪ್ರದೇಶದ ಗೊಂಡಾ ಮತ್ತು ಜಿಲಾಹಿ ನಡುವೆ ಇರುವ ಪಿಕೌರಾ ಪ್ರದೇಶದಲ್ಲಿ ರೈಲಿನ ಬೋಗಿಗಳು ಹಳಿ ತಪ್ಪಿದ ಪರಿಣಾಮ ದುರ್ಘಟನೆ ಸಂಭವಿಸಿದೆ.
ರೈಲು ಅವಘಡ ನಡೆದ ಸ್ಥಳಕ್ಕೆ ಪರಿಹಾರ ಕಾರ್ಯಾಚರಣೆಗಾಗಿ ರಕ್ಷಣಾ ತಂಡವನ್ನು ಕಳುಹಿಸಲಾಗಿದೆ. ಕೆಲವು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ರೈಲು ಸಂಖ್ಯೆ 15904 ಚಂಡೀಗಢದಿಂದ ಅಸ್ಸಾಂನ ದಿಬ್ರುಗಢಕ್ಕೆ ತೆರಳುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಒಟ್ಟು 12 ಬೋಗಿಗಳೊಂದಿಗೆ ರೈಲು ಸಂಚರಿಸುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ. ಅದರ ಪೈಕಿ ನಾಲ್ಕು ಬೋಗಿಗಳು ಜುಲಾಹಿ ರೈಲ್ವೆ ನಿಲ್ದಾಣದ ಕೆಲವು ಕಿಲೋಮೀಟರ್ ಮೊದಲು ಹಳಿ ತಪ್ಪಿವೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಅಪಘಾತದ ಮಾತನಾಡಿದ್ದಾರೆ. ಸ್ಥಳಕ್ಕೆ ತೆರೆಳಿರುವ ಅಧಿಕಾರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತದ ಸ್ಥಳಕ್ಕೆ ತಕ್ಷಣ ತಲುಪುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಪರಿಹಾರ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಗಾಯಾಳುಗಳಿಗೆ ಸಕಾಲದಲ್ಲಿ ಚಿಕಿತ್ಸೆ ನೀಡುವಂತೆ ಸಿಎಂ ಹೇಳಿದ್ದಾರೆ. ರೈಲ್ವೆ ವೈದ್ಯಕೀಯ ಕ್ಯಾನ್ ಸ್ಥಳಕ್ಕೆ ತಲುಪಿದೆ ಮತ್ತು ಈಶಾನ್ಯ ರೈಲ್ವೆ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ.