SHOCKING | ಬೆಳಗಾವಿಯಲ್ಲಿ ತರಬೇತಿ ವಿಮಾನ ತುರ್ತು ಲ್ಯಾಂಡಿಂಗ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿಯಲ್ಲಿ ತರಬೇತಿ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ತುರ್ತು ಭೂಸ್ಪರ್ಶ ಮಾಡಿದೆ.
ಸಾಂಬ್ರಾ ಏರ್‌ಪೋರ್ಟ್‌ನಿಂದ ಹೊರಟಿದ್ದ ವಿಮಾನ ಹೊನ್ನಿಹಾಳದ ಹೊರವಲಯದಲ್ಲಿ ತುರ್ತು ಭೂಸ್ಪರ್ಶವಾಗಿದೆ.

ವಿಮಾನದಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದು, ಕಾಲುಗಳಿಗೆ ಗಾಯವಾಗಿದೆ. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ವಿಷಯ ತಿಳಿದಂತೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ರೆಡ್‌ಬರ್ಡ್ ಸಂಸ್ಥೆಗೆ ಸೇರಿದ ತರಬೇತಿ ವಿಮಾನ ಇದಾಗಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!