ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದ ಬಗ್ಗೆ ತನಿಖಾ ಆಯೋಗದ ಮುಂದೆ ಮಾಹಿತಿ ಕೊಡುವುದಾಗಿ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದಲ್ಲಿ ವಿಧಾನಸೌಧದ ಮುಂದೆ ಕಾರ್ಯಕ್ರಮ ಮಾಡಬೇಡಿ ಎಂದು ಪೊಲೀಸರು ಪತ್ರ ಬರೆದಿದ್ದರೂ ಕಾರ್ಯಕ್ರಮ ಮಾಡಿರುವ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾನು ಈಗ ಯಾವುದರ ಬಗ್ಗೆಯೂ ಮಾತನಾಡಲ್ಲ ಎಂದಿದ್ದಾರೆ.
ನ್ಯಾ.ಮೈಕಲ್ ಕುನ್ಹಾ ನೇತೃತ್ವದ ಆಯೋಗಕ್ಕೆ ತನಿಖೆಗೆ ವಹಿಸಿದ್ದೇವೆ. ಅವರು ತನಿಖೆ ಮಾಡಿ ವರದಿ ಕೊಡಲಿ. ತನಿಖೆ ಆಗೋವರೆಗೂ ನಾವು ಯಾರು ಏನೂ ಮಾತಾಡಲ್ಲ. ಈಗ ಹೇಳಿಕೆ ಕೊಟ್ಟರೆ ಅದು ಸರಿ ಹೋಗಲ್ಲ. ಅದಕ್ಕೋಸ್ಕರ ನಾನು ಈ ಬಗ್ಗೆ ಮಾತಾಡಲ್ಲ ಎಂದರು.