Sunday, January 29, 2023

Latest Posts

ಕಾಲ್ತುಳಿತ ಪ್ರಕರಣ: ಬಾಲಿವುಡ್ ನಟ ಶಾರುಖ್ ಖಾನ್ ಗೆ ಬಿಗ್ ರಿಲೀಫ್ ಕೊಟ್ಟ ಸುಪ್ರೀಂ ಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಐದು ವರ್ಷಗಳ ಹಳೆಯ ಕಾಲ್ತುಳಿತ ಪ್ರಕರಣದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಗೆ ಸುಪ್ರೀಂ ಕೋರ್ಟ್’ನಿಂದ ರಿಲೀಫ್ ಸಿಕ್ಕಿದೆ.

2017ರಲ್ಲಿ, ರಯೀಸ್ ಚಿತ್ರದ ಪ್ರಚಾರದ ಸಮಯದಲ್ಲಿ, ಗುಜರಾತ್‍ನ ವಡೋದರಾ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದರು ಮತ್ತು ಅನೇಕರು ಗಾಯಗೊಂಡಿದ್ದರು.ಈ ಪ್ರಕರಣದಲ್ಲಿ ಶಾರುಖ್ ಖಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸ್ಥಳೀಯ ಕಾಂಗ್ರೆಸ್ ನಾಯಕ ಜಿತೇಂದ್ರ ಸೋಲಂಕಿ ಅವರು ಶಾರುಖ್ ಖಾನ್ ವಿರುದ್ಧ ವಡೋದರಾ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣದಲ್ಲಿ, ಹೈಕೋರ್ಟ್ ಈಗಾಗಲೇ ಪ್ರಕರಣವನ್ನು ರದ್ದುಗೊಳಿಸಲು ನಿರ್ಧರಿಸಿತ್ತು. ಈಗ ಸುಪ್ರೀಂ ಕೋರ್ಟ್ ಕೂಡ ಹೈಕೋರ್ಟ್ ತೀರ್ಪನ್ನು ಸಮರ್ಥಿಸಿಕೊಂಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!