ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ಕೇಂದ್ರದಿಂದ 10 ಲಕ್ಷ ಪರಿಹಾರ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನವದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ. ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಿಸಿದೆ.

ಭೀಕರ ಕಾಲ್ತುಳಿತದಿಂದ ಕುಂಭಮೇಳಕ್ಕೆ ಹೊರಟಿದ್ದ 18 ಜನ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಮೃತರಲ್ಲಿ 11 ಮಹಿಳೆಯರು ಹಾಗೂ ನಾಲ್ಕು ಮಕ್ಕಳು ಸೇರಿದ್ದಾರೆ ಎಂದು ವರದಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!