ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ (Munish Moudgil) ಸೇರಿದಂತೆ 6 ಐಎಎಸ್ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಹೆಚ್ಚುವರಿ ಜವಾಬ್ದಾರಿ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರನ್ನು ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತರನ್ನಾಗಿ ನೇಮಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುನೀಶ್ ಮೌದ್ಗಿಲ್ ಅವರನ್ನು ಬಿಬಿಎಂಪಿಯ ವಿಶೇಷ ಆಯುಕ್ತರನ್ನಾಗಿ ನೇಮಿಸುವ ಇಚ್ಛೆ ವ್ಯಕ್ತಪಡಿಸಿದ್ದರು. ಆ ಮೂಲಕ ಪೌರಕಾರ್ಮಿಕರ ಆದಾಯವನ್ನು ಸುಧಾರಿಸುವತ್ತ ಗಮನಹರಿಸಿದ್ದಾರೆ ಎನ್ನಲಾಗಿದೆ.
6 ಐಎಎಸ್ ಅಧಿಕಾರಿಗಳಿಗೆ ಬಿಬಿಎಂಪಿಯಲ್ಲಿ ಹೆಚ್ಚುವರಿ ಜವಾಬ್ದಾರಿ
ಮುನೀಶ್ ಮೌದ್ಗಿಲ್-ಬಿಬಿಎಂಪಿ ವಿಶೇಷ ಆಯುಕ್ತ(ಕಂದಾಯ)
ವಿನೋತ್ ಪ್ರಿಯಾ-ಬಿಬಿಎಂಪಿ ದಕ್ಷಿಣ ವಲಯ ಆಯುಕ್ತೆ
ಕರೀಗೌಡ-ಬಿಬಿಎಂಪಿ ಯಲಹಂಕ ವಲಯ ಆಯುಕ್ತ
ಆರ್.ಸ್ನೇಹಲ್-ಬಿಬಿಎಂಪಿ ಪೂರ್ವ ವಲಯ ಆಯುಕ್ತೆ
ಪ್ರೀತಿ ಗೆಹ್ಲೋಟ್-ಬಿಬಿಎಂಪಿ ದಾಸರಹಳ್ಳಿ ವಲಯ ಆಯುಕ್ತೆ
ಇಬ್ರಾಹಿಂ ಮೈಗೂರ್-ಬಿಬಿಎಂಪಿ ಮಹದೇವಪುರ ವಲಯ ಆಯುಕ್ತ