ರಾಜ್ಯ ಸರ್ಕಾರದಿಂದ ಮತ್ತೆ 6 ಐಎಎಸ್ ಅಧಿಕಾರಿಗಳ ವರ್ಗಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್ 

ರಾಜ್ಯ ಸರ್ಕಾರದಿಂದ ಮತ್ತೆ 6 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಮುನೀಶ್ ಮುದ್ಗಿಲ್, ಐಎಎಸ್ (ಕೆಎನ್:1998), ಸರ್ಕಾರದ ಪ್ರಧಾನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಆಡಳಿತ ಸುಧಾರಣೆ), ಬೆಂಗಳೂರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.ಮುಂದಿನ ಆದೇಶದವರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ವಿಶೇಷ ಆಯುಕ್ತ (ಕಂದಾಯ) ಆಗಿ ನೇಮಿಸಲಾಗಿದೆ.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಬೆಂಗಳೂರು ಕಾರ್ಯನಿರ್ವಾಹಕ ನಿರ್ದೇಶಕಿ ವಿನೋತ್ ಪ್ರಿಯಾ ಆರ್., ಐಎಎಸ್ (ಕೆಎನ್:2012) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಬೆಂಗಳೂರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಲಯ ಆಯುಕ್ತರಾಗಿ (ದಕ್ಷಿಣ) ನೇಮಿಸಲಾಗಿದೆ.

ಬೆಂಗಳೂರು ಮಹಾನಗರ ಸಾರಿಗೆ ನಿಗಮದ (ಬಿಎಂಟಿಸಿ) ನಿರ್ದೇಶಕಿ (ಐಟಿ) ಸ್ನೇಹಲ್.ಆರ್., ಐಎಎಸ್ (ಕೆಎನ್:2013) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಲಯ ಆಯುಕ್ತರಾಗಿ (ಪೂರ್ವ) ನೇಮಿಸಲಾಗಿದೆ.

ಬೆಂಗಳೂರಿನ ಹಣಕಾಸು ನೀತಿ ಸಂಸ್ಥೆಯ ಹೆಚ್ಚುವರಿ ನಿರ್ದೇಶಕಿ ಶ್ರೀವಿದ್ಯಾ ಪಿ.ಐ., ಐಎಎಸ್ (ಕೆಎನ್:2010) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ರಾಷ್ಟ್ರೀಯ ಜೀವನೋಪಾಯ ಮಿಷನ್ (ಎನ್‌ಎಲ್‌ಎಂ) ಮಿಷನ್ ನಿರ್ದೇಶಕರಾಗಿ ನಿಯೋಜಿಸಲಾಗಿದೆ.

ಬೆಂಗಳೂರಿನ ರಾಷ್ಟ್ರೀಯ ಜೀವನೋಪಾಯ ಮಿಷನ್ (ಎನ್‌ಎಲ್‌ಎಂ) ಮಿಷನ್ ನಿರ್ದೇಶಕಿ ಡಾ.ರಾಗಪ್ರಿಯ ಆರ್., ಐಎಎಸ್ (ಕೆಎನ್:2011) ಅವರನ್ನು ವರ್ಗಾವಣೆ ಮಾಡಲಾಗಿದೆ. ಉದ್ಯೋಗ ಮತ್ತು ತರಬೇತಿ ಆಯುಕ್ತರಾಗಿ ನೇಮಿಸಲಾಗಿದೆ.

ಜ್ಯೋತಿ ಕೆ., ಐಎಎಸ್ (ಕೆಎನ್:2012), ಆಯುಕ್ತರು, ಉದ್ಯೋಗ ಮತ್ತು ತರಬೇತಿ, ಬೆಂಗಳೂರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧ್ಯಕ್ಷರಾಗಿ ನಿಯೋಜಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!