ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಡಳಿತ ಯಂತ್ರದಲ್ಲಿ ಮತ್ತೆ ರಾಜ್ಯ ಸರ್ಕಾರದಿಂದ ಮೇಜರ್ ಸರ್ಜರಿ ನಡೆಸಿದ್ದು , ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.
ಈ ಕುರಿತು ಇಂದು ಅಧಿಸೂಚನೆ ಹೊರಡಿಸಲಾಗಿದ್ದು, ಕೆಇಎ ಕಾರ್ಯನಿರ್ವಾಹಕ ನಿರ್ದೇಶಿಕಿಯಾಗಿದ್ದ ಐಎಎಸ್ ಅಧಿಕಾರಿ ರಮ್ಯಾ.ಎಸ್ ಅವರನ್ನು ಬಿಎಂಆರ್ ಡಿ ಕಮೀಷನರ್ ಆಗಿ ವರ್ಗಾವಣೆ ಮಾಡಿ ಆದೇಶಿಸಿದೆ.
ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ಎಂ.ಎಸ್ ದಿವಾಕರ್ ಅವರನ್ನು ವಿಜಯನಗರ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.
ಇನ್ನೂ ಗದಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಡಾ.ಸುಶೀಲಾ.ಬಿ ಅವರನ್ನು ಯಾದಗಿರಿ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಿ ಆದೇಶಿಸಿದೆ.
ವಿಜಯನಗರ ಜಿಲ್ಲಾಧಿಕಾರಿಯಾಗಿದ್ದ ವೆಂಕಟೇಶ್.ಟಿ ಅವರನ್ನು ಬಳ್ಳಾರಿ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಿದೆ.