ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರ ಮೂವರು IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಐಎಎಸ್ ಅಧಿಕಾರಿ ಡಾ.ಆರ್ ವಿಶಾಲ್ ಅವರನ್ನು ಹಣಕಾಸು ಇಲಾಖೆಯ ವಿತ್ತ ಸುಧಾರಣೆಯ ಕಾರ್ಯದರ್ಶಿಯನ್ನಾಗಿ ನೇಮಿಸಿದೆ.ಜೆಹರಾ ನಸೀಂ ಅವರನ್ನು ಕರ್ನಾಟಕ ರೇಷ್ಮೆ ಕೈಗಾರಿಕಾ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿದೆ.
ಇನ್ನೂ ಬಿಬಿಎಂಪಿಯಲ್ಲಿ ಚುನಾವಣಾ ಘಟಕದ ವಿಶೇಷ ಆಯುಕ್ತರಾಗಿದ್ದ ಉಜ್ವರ್ ಕುಮಾರ್ ಘೋಷ್ ಅವರನ್ನು ಕರ್ನಾಟಕ ಹಣಕಾಸು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.