PSI DEATH | ವರ್ಗಾವಣೆಗೊಂಡಿದ್ದ ಪಿಎಸ್‌ಐ ಪರಶುರಾಮ್‌ ಡೆತ್‌, ಪೋಸ್ಟಿಂಗ್‌ಗೆ 30ಲಕ್ಷ ಡಿಮ್ಯಾಂಡ್‌?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸ್ತಿದ್ದ ಪರಶುರಾಮ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಪಿಎಸ್ಐ ಪರಶುರಾಮ್ ಅವರು ಸೈಬರ್ ಕ್ರೈಮ್ ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದರು. ಮೊನ್ನೆ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು. ನಿನ್ನೆ ಸಂಜೆ ಪೊಲೀಸ್ ಕ್ವಾಟರ್ಸ್ ನಿವಾಸದಲ್ಲಿ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಪಿಎಸ್ಐ ಪರಶುರಾಮ ಸಾವಿನ ಸುತ್ತ ಅನುಮಾನಗಳು ಶುರುವಾಗಿದ್ದು, ಯಾದಗಿರಿ ನಗರದ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ನಗರದ ಖಾಸಗಿ ಆಸ್ಪತ್ರೆ ಬಳಿ ವಿವಿಧ ಸಂಘಟನೆಯ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ರವಾನೆ ಮಾಡಲಾಗುತ್ತಿತ್ತು. ಈ ವೇಳೆ ಆ್ಯಂಬುಲೆನ್ಸ್ ಅಡ್ಡಗಟ್ಟಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

ಸ್ಥಳೀಯ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಮೇಲೆ ನೊಂದ ಕುಟುಂಬ ಗಂಭೀರ ಆರೋಪ ಮಾಡಿದೆ. ಪೋಸ್ಟಿಂಗ್​ಗಾಗಿ ಲಕ್ಷ ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪ ಮಾಡಿದೆ. ಇದರಿಂದ ಸಾಲದ ಸುಳಿಗೆ ಸಿಲುಕಿದ್ದರು. ಇದೀಗ ‌ಮತ್ತೆ ನಿಯಮಬಾಹೀರ ವರ್ಗಾವಣೆ ಮಾಡಿ ಆದೇಶ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here