ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯಾದ್ಯಂತ ಸಾರಿಗೆ ಸಿಬ್ಬಂದಿ ಹತ್ತು ದಿನಗಳಿಂದ ನಡೆಸುತ್ತಿರುವ ಪ್ರತಿಭಟನೆ ಇನ್ನೂ ಗೊಂದಲದಲ್ಲೇ ಮುಂದುವರಿದಿದ್ದು, ಇತ್ತ ಮುಷ್ಕರನಿರತ ಸಾರಿಗೆ ಸಿಬ್ಬಂದಿ ಮೇಲೆ ಸಂಸ್ಥೆ ವರ್ಗಾವಣೆ ಅಸ್ತ್ರ ಪ್ರಯೋಗಿಸಿದೆ.
ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ ಮುಷ್ಕರನಿರತರ ವಿರುದ್ಧ ಕಠಿಣ ಕ್ರಮಕೈಗೊಂಡಿದ್ದು, ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಮುಷ್ಕರ ನಡೆಸುತ್ತಿರುವ ಸಾರಿಗೆ ಸಿಬ್ಬಂದಿ ಪೈಕಿ ಚಾಲಕ-ನಿರ್ವಾಹಕರು ಸೇರಿ 45 ಮಂದಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೂರ್ಮರಾವ್ ವರ್ಗಾವಣೆ ಆದೇಶ ಹೊರಡಿಸಿದ್ದಾರೆ.