ಬ್ರೇಕ್ ಫೇಲಾಗಿ ಸಾರಿಗೆ ಬಸ್ ಪಲ್ಟಿ: ಪ್ರಯಾಣಿಕರಿಗೆ ಗಾಯ

ಹೊಸದಿಗಂತ ವರದಿ,ವಿಜಯಪುರ:

ಸಾರಿಗೆ ಬಸ್ ಬ್ರೇಕ್ ಫೇಲಾಗಿ ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾದ ಜೋಡು ಗುಡಿ ಬಳಿ ನಡೆದಿದೆ.

ವಿಜಯಪುರದಿಂದ ಇಂಡಿಗೆ ಹೊರಟಿದ್ದ ಸಾರಿಗೆ ಬಸ್ ಪಲ್ಟಿಯಾಗಿದ್ದು, ಬಸ್‌‌ನಲ್ಲಿ ಸುಮಾರು 40 ಕ್ಕೂ ಹೆಚ್ಚು ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!