ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸಾರಿಗೆ ನೌಕರರಿಗೆ ಬಿಗ್‌ ಶಾಕ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸಾರಿಗೆ ಇಲಾಖೆ ನೌಕರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ವೇತನ ಪರಿಷ್ಕರಣೆ ಮನವಿಯನ್ನು ರಾಜ್ಯ ಸರ್ಕಾರವು ತಿರಸ್ಕರಿಸಿದೆ.

ಸಾರಿಗೆ ನಿಗಮಗಳ ವೇತನ ಪರಿಷ್ಕರಣೆಯ ಹೆಚ್ಚುವರಿ ವೆಚ್ಚಕ್ಕೆ ವಿಶೇಷ ಅನುದಾನ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸಾರಿಗೆ ಇಲಾಖೆ ಎಲ್ಲಾ ನಿಗಮಗಳು ಮನವಿ ಮಾಡಿದ್ದವು. ಆದರೆ ಸಾರಿಗೆ ನಿಗಮಗಳ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ. ವೇತನ ಪಾವತಿ- ಇಂಧನ ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನ ಒದಗಿಸಲು ಸಾಧ್ಯವಿಲ್ಲ. ಸಾರಿಗೆ ನಿಗಮಗಳು ತಮ್ಮ ಆಂತರಿಕ ಸಂಪನ್ಮೂಲಗಳಿಂದಲೇ ಭರಿಸಿಕೊಳ್ಳುವಂತೆ ಸೂಚನೆ ನೀಡಿದೆ.

ಶಕ್ತಿ ಯೋಜನೆಗೆ ಸರ್ಕಾರಕ್ಕೆ 4 ಸಾವಿರ ಕೋಟಿಯಷ್ಟು ವಾರ್ಷಿಕ ಹೆಚ್ಚುವರಿ ಹೊರೆ ತಗುಲಲಿದೆ. ಹೀಗಾಗಿ ನಿಗಮಗಳಿಗೆ ಹೆಚ್ಚುವರಿ ವಿಶೇಷ ಅನುದಾನ ಒದಗಿಸಲು ಸಾಧ್ಯವಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರು ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಟಾಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಸಾಮಾನ್ಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶ ಕಲ್ಪಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!