ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಸಾರಿಗೆ ನೌಕರರ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಕೂಡ ಯಾವುದೇ ಬಸ್ ರಸ್ತೆಗಿಳಿದಿಲ್ಲ. ಹೀಗಾಗಿ ಪ್ರಯಾಣಿಕರು ಪರದಾಡುವಂತಾಗಿದೆ.
ಇಂದು ಸಹ ಯಾವುದೇ ಸಾರಿಗೆ ಬಸ್ ಸಂಚಾರ ಕಂಡುಬಂದಿಲ್ಲ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಖಾಸಗಿ ಬಸ್ ವ್ಯವಸ್ಥೆ ಮಾಡಲಾಗಿದೆ. ಆದರೆ ಖಾಸಗಿ ಬಸ್ ನಲ್ಲಿ ಪ್ರಯಾಣಿಕರಿಂದ ಹೆಚ್ಚನ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರು ಕೇಳಿಬರುತ್ತಿದೆ.
ಬೇಡಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಬಿಗಿ ಪಟ್ಟು ಹಿಡಿದಿದ್ದು, ಈ ನಡುವೆಯೂ ಇಂದಿನಿಂದ ಬಿಎಂಟಿಸಿ ಬಸ್ ಗಳನ್ನು ರಸ್ತೆಗಿಳಿಸಲು ನಿರ್ಧಾರ ಮಾಡಲಾಗಿದೆ. ತರಬೇತಿ ನಿರತ ಸಿಬ್ಬಂದಿಗೆ ಕೆಲಸಕ್ಕೆ ಹಾಜರಾಗಲು ಸೂಚನೆ ನೀಡಲಾಗಿದೆ.