ಹೊಸದಿಗಂತ ವರದಿ,ವಿಜಯನಗರ:
ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ಸೋಮವಾರ ವಿಶ್ವ ಪ್ರಸಿದ್ಧ ಹಂಪಿಗೆ ಭೇಟಿ ನೀಡಿ ವಿಶೇಷ ಪೂಜೆ, ಅರ್ಚನೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು. ಸಚಿವರ ಆಪ್ತ ಗೆಳೆಯ, ಮಾಜಿ ಸಚಿವ ಜನಾರ್ಧನ್ ರೆಡ್ಡಿ ಅವರು ಸಾಥ್ ನೀಡಿರುವುದು ಗಮನಸೆಳೆಯಿತು. ಹಂಪಿಯ ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನ, ಯಂತ್ರೋದ್ಧಾರಕ ಪ್ರಾಣ ದೇವರು, ಶ್ರೀ ರಾಮಲಕ್ಷ್ಮಣ ದೇವಸ್ಥಾನ, ಪುರುಂದರ ಮಂಟಪ ಸೇರಿದಂತೆ ನಾನಾ ಸೋಮವಾರ ಭೇಟಿ ನೀಡಿ ದರ್ಶನ ಪಡೆದರು. ನಂತರ
ಹಂಪಿಯ ವಿವಿಧ ಸ್ಮಾರಕಗಳನ್ನು ಉಭಯ ನಾಯಕರು ವೀಕ್ಷಿಸಿ ಕಣ್ತುಂಬಿಕೊಂಡರು.
ಈ ಸಂದರ್ಭದಲ್ಲಿ ಮಾಜಿ ಸಂಸದೆ ಜೆ.ಶಾಂತಾ, ಬೂಡಾ ಅಧ್ಯಕ್ಷ ಕಾರ್ಕಲತೋಟ ಪಾಲನ್ನ, ವೀರಶೇಖರ್ ರೆಡ್ಡಿ, ಕೃಷ್ಣಾ ರೆಡ್ಡಿ, ಮೋತ್ಕರ್ ಶ್ರೀನಿವಾಸ್, ತಿಮ್ಮಪ್ಪ ಸೇರಿದಂತೆ ಅನೇಕ ಮುಖಂಡರು ಇದ್ದರು. ಇದಕ್ಕೂ ಮುನ್ನ ಸಚಿವ ಬಿ.ಶ್ರೀರಾಮುಲು ಹಾಗೂ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರು ಹಂಪಿಯ ಪ್ರದೇಶದಲ್ಲಿ ವಿವಿಧ ಪೂಜೆ, ಹೋಮ, ಹವನ ನೆರವೇರಿಸಿದರು.